Monday, March 30, 2026
Homeಕ್ರೈಮ್ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆ: ಆಂಧ್ರ ಮೂಲದ ಯುವಕ ಬ್ರಿಡ್ಜ್ ನಿಂದ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆ: ಆಂಧ್ರ ಮೂಲದ ಯುವಕ ಬ್ರಿಡ್ಜ್ ನಿಂದ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಯುವಕನೊಬ್ಬ ಭದ್ರಾ ಬಲದಂಡೆ ನಾಲೆ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಆಂಧ್ರ ಪ್ರದೇಶ ಮೂಲದ ವಿನಯ್ ರೆಡ್ಡಿ (26) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಭದ್ರಾ ಡ್ಯಾಂನಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಭೋಪಾಲ್ ಮೂಲದ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಅವರು ಕೆಲಸ ಮಾಡುತ್ತಿದ್ದರು. 

ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞ ಮಲ್ಪೆ ಈಶ್ವರ್, ಯುವಕನ ಶವ ಪತ್ತೆ ಮಾಡಿದ್ದಾರೆ. ಈ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!