ಚಿಕ್ಕಮಗಳೂರು: ಅನಾರೋಗ್ಯ ಮತ್ತು ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಹಾಲಪ್ಪ ಬಡಾವಣೆಯಲ್ಲಿ ನಡೆದಿದೆ.
ಹೌದು .. ತರೀಕೆರೆ ತಾಲೂಕು ರಂಗೇನ ಹಳ್ಳಿಯ ನಿವಾಸಿ ಲಕ್ಷ್ಮಣ್ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬೀರೂರಿನ ಹೊರವಲಯದ ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಮದ್ಯ ವ್ಯಸನಿಯಾಗಿದ್ದ ಲಕ್ಷ್ಮಣ್ ಪತ್ನಿಯನ್ನು ಹಿಂಸಿಸುವುದು, ಮನೆಯ ಸಾಮಗ್ರಿಗಳನ್ನು ಮಾರಾಟ ಮಾಡುವುದರಿಂದ ಬೇಸತ್ತ ಪತ್ನಿ ಇತ್ತೀಚೆಗೆ ಬಿಟ್ಟುಹೋಗಿದ್ದರು.
ಹಾಗೆ ಲಕ್ಷ್ಮಣ್ ಅವರ ಎಡಗೈ ಮೂಳೆ ಮುರಿದಿದ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ನೋವು ಮರುಕಳಿಸುತ್ತಿತ್ತು. ಇದರಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಕರಣ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
