Sunday, February 15, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆ: ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು: ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆ: ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು: ನಗರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಸಿದ ಹಿನ್ನೆಲೆಯಲ್ಲಿ ಡಿಜೆ ಮಾಲೀಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ನಿತೇಶ್ ಮತ್ತು ವಿವಿಲ್ ಬೆನ್ನಿಸ್ ಎಂಬುವರ ವಿರುದ್ಧ ಸಾರ್ವಜನಿಕ ಸ್ಥಳದಲ್ಲಿ ಶಬ್ದ ಮಾಲಿನ್ಯ ಉಂಟು ಮಾಡಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಆರೋಪದಡಿ (BNS) 285, 292 ಹಾಗೂ 92(d) (h) ಸೆಕ್ಷನ್‌ಗಳ ಅಡಿಯಲ್ಲಿ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಗರದ ಬಸವನಹಳ್ಳಿ ಮುಖ್ಯರಸ್ತೆಯ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಂಘದಿಂದ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವ ಮೆರವಣಿಗೆ ನಗರದಲ್ಲಿ ಶನಿವಾರ ಅದ್ಧೂರಿಯಿಂದ ನಡೆಯಿತು. ಆದರೆ, ಚಿಕ್ಕಮಗಳೂರು ನಗರದಲ್ಲಿ ನಡೆದ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಡಿಜಿ ಬಳಕೆ ಮಾಡಿದ ಆರೋಪದಡಿ ಎಫ್‌ಐಆರ್‌ ದಾಖಲಿಸಲಾಗಿದೆ. 

ಸರ್ವೋಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯಗಳ ತೀರ್ಪುಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಡಿಜಿ ಬಳಕೆ ಸಂಪೂರ್ಣ ನಿಷೇಧವಾಗಿದೆ. ಆದರೆ ಇದನ್ನು ಲೆಕ್ಕಿಸದೆ ಅಧಿಕ ಧ್ವನಿಯ ಡಿಜೆ ಬಳಸಿ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಶಬ್ದ ಮಾಲಿನ್ಯ ಉಂಟುಮಾಡಿರುವುದಲ್ಲದೆ ಸಾರ್ವಜನಿಕರಿಗೆ ಉಪದ್ರವ ಮಾಡಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!