ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ನಗರದ ತಾಲ್ಲೂಕು ಕಚೇರಿ ಸಮೀಪದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೀರ್ಘಾಯುಷ್ಯಿಗಾಗಿ ಪ್ರಾರ್ಥಿಸಿದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ಮಾತನಾಡಿ ನಾಡಿನಲ್ಲಿ ರೈತಪರವಾಗಿ ಅತ್ಯಂತ ಕಾಳಜಿ ಹೊಂದಿದ ನಾಯಕ ಕುಮಾರಸ್ವಾಮಿ. ರಾಜ್ಯದಲ್ಲಿ ಎರಡು ಭಾರೀ ಮುಖ್ಯಮಂತ್ರಿ ಸ್ಥಾನ ಅಲಂ ಕರಿಸಿ ಸಾರಾಯಿ, ಲಾಟರಿ ನಿಷೇಧಿಸಿ, ಗ್ರಾಮವಾಸ್ತವ್ಯ ನಡೆಸಿದಲ್ಲದೇ, ಏಡ್ಸ್ ಪೀಡಿತ ರೋಗಿಯ ಮನೆಗೆ ತೆರಳಿ ಧೈರ್ಯ ತುಂಬುವ ಕೆಲಸ ಮಾಡಿದವರು ಎಂದರು.
ನಾಡಿನಲ್ಲಿ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ವೇಳೆ ಸಾಲಬಾಧೆಯಿಂದ ತತ್ತರಿಸಿ ಹೋಗಿದ್ಧ ರೈತರಿಗೆ ಸಾಲಮನ್ನಾ ಯೋಜನೆ ಜಾರಿಗೊಳಿಸಿ ಬದುಕಿಗೆ ಬೆಳಕನ್ನು ತೋರುವ ಮೂ ಲಕ ಅನ್ನದಾತನಿಗೆ ಆಸರೆಯಾದವರು. ರಾಜ್ಯಸರ್ಕಾರದ ಆಳ್ವಿಕೆಯಲ್ಲಿ ಪ್ರಪ್ರಥಮ ಭಾರಿಗೆ ರೈತರ ಧ್ವನಿಗೂ ಡಿಸಿ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರಿಗೆ ಆರೋಗ್ಯ ವೃದ್ದಿಗೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ಕಾರ್ಯಕರ್ತರ ಅಭಿಲಾಷೆಯಾಗಿದ್ದು ಆ ನಿಟ್ಟಿನಲ್ಲಿ ಇಂದು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ, ಸಿಹಿ ಹಂ ಚಿಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ನಗರ ಪ್ರಧಾನ ಕಾರ್ಯದ ರ್ಶಿ ಸಿ.ಕೆ.ಮೂರ್ತಿ, ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ಮುಖಂಡರುಗಳಾದ ದೇವರಾಜ್‌ಅರಸ್, ಶಿವು, ದಿನೇಶ್, ಚಿದಾನಂದ್, ಜಯಂತಿ, ರತ್ನ, ರಾಮು, ಪ್ರದೀಪ್, ಅಣ್ಣಪ್ಪಶೆಟ್ಟಿ ಮತ್ತಿತರರು ಉಪಸ್ಥಿತ ರಿದ್ದರು.
