Wednesday, September 30, 2026
Homeಕ್ರೈಮ್Chickmagalore: ಪಿಎಸ್ಐ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ: ನಕಲಿ ಮಹಿಳಾ ಪೊಲೀಸ್‌ ಅಧಿಕಾರಿ ಅರೆಸ್ಟ್!

Chickmagalore: ಪಿಎಸ್ಐ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ: ನಕಲಿ ಮಹಿಳಾ ಪೊಲೀಸ್‌ ಅಧಿಕಾರಿ ಅರೆಸ್ಟ್!

Telegram Group
Join Now

ಚಿಕ್ಕಮಗಳೂರು: ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್ಐ ಎಂದು ಪರಿಚಯಿಸಿಕೊಂಡು, ಸಾರ್ವಜನಿಕರನ್ನು ನಂಬಿಸಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರು ಪಡೆದು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್ಐಯನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಮನಗರ ಜಿಲ್ಲೆ ಮೂಲದ ನಿವೇದಿತಾ ಗೌಡ ಬಂಧಿತ ಆರೋಪಿ. ಚಿಕ್ಕಮಗಳೂರು ನಗರದಲ್ಲಿ ಕೆಫೆ ನಡೆಸುತ್ತಿದ್ದ ನಿವೇದಿತಾ, ತಾನು ಪೊಲೀಸ್ ಅಧಿಕಾರಿ ಎಂಬಂತೆ ಕಾಣಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳ ರೀತಿಯ ಕಟಿಂಗ್ ಹಾಗೂ ಡ್ರೆಸ್ ಮಾಡಿಕೊಳ್ಳುತ್ತಿದ್ದಳು ಎನ್ನಲಾಗಿದೆ.
ಕೆಫೆಗೆ ಬರುತ್ತಿದ್ದ ಮಹಿಳೆಯರು ಹಾಗೂ ಯುವಕರನ್ನು ಪರಿಚಯ ಮಾಡಿಕೊಂಡು, ತಾನು ಪಿಎಸ್ಐ ಎಂದು ನಂಬಿಸಿ ಹಣ ಹಾಗೂ ಚಿನ್ನ ಪಡೆದು ವಂಚಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಪರಿಚಯಸ್ಥರಿಂದ ಐಷಾರಾಮಿ ಕಾರುಗಳನ್ನು ಓಡಾಟಕ್ಕಾಗಿ ಪಡೆದುಕೊಂಡು, ಬಳಿಕ ಅವುಗಳನ್ನು ಬೇರೆಯವರಿಗೆ ಮಾರಾಟ ಮಾಡಿರುವ ಆರೋಪವೂ ಕೇಳಿಬಂದಿದೆ.
ನಿವೇದಿತಾ ವಿರುದ್ಧ ಬಸವನಹಳ್ಳಿ ಹಾಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, 25ಕ್ಕೂ ಅಧಿಕ ಮಂದಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೋಸ ಹೋದ 20ಕ್ಕೂ ಅಧಿಕ ಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಹಲವು ಜಿಲ್ಲೆಗಳಲ್ಲೂ ತಾನು ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡು ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ನಿವೇದಿತಾ, ತಾನು ವಂಚನೆಯಿಂದ ಪಡೆದ ಹಣ ಹಾಗೂ ಚಿನ್ನವನ್ನು ತನ್ನ ಪ್ರಿಯಕರ ದೇವುಗೆ ನೀಡಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಹೇಳಿದ್ದಾಳೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೇವು ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಇನ್ನು, ನಿವೇದಿತಾಳ ಮೊಬೈಲ್ ಪರಿಶೀಲನೆ ವೇಳೆ ಬೇರೆ ಬೇರೆ ಹೆಸರುಗಳಲ್ಲಿ ತಯಾರಿಸಲಾಗಿದ್ದ ನಕಲಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ ಎನ್ನಲಾಗಿದೆ. ಕರ್ತವ್ಯಕ್ಕೆ ರಜೆ ಪಡೆದು ಬಂದಿರುವುದಾಗಿ ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ನಿವೇದಿತಾಳನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದು, ವಂಚನೆಗೊಳಗಾದವರ ಸಂಖ್ಯೆ ಹಾಗೂ ವಂಚಿಸಿರುವ ಹಣದ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!