ಚಿಕ್ಕಮಗಳೂರು: ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಆತಂಕ ನಿವಾರಣೆ, ಏಕಾಗ್ರತೆ ಸಾಧಿಸುವುದು, ಮಾನಸಿಕ ಒತ್ತಡ ನಿವಾರಣೆಗಳ ಬಗ್ಗೆ ಸಂವಾದ ಪ್ರೇರಣಾ ಕಾರ್ಯಕ್ರಮಗಳನ್ನು ಶೈಕ್ಷಣಿಕ ವರ್ಷದಲ್ಲಿ ತಜ್ಞರಿಂದ ಏರ್ಪಡಿಸುವ ಬಗ್ಗೆ ಇಂದು ಪೋಷಕ-ಶಿಕ್ಷಕರ ಮಹಾಸಭೆಯಲ್ಲಿ ಪೋಷಕರಿಗೆ ತಿಳಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ತಿಳಿಸಿದರು.
ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರನ್ನು ತಲುಪಲು ನವೆಂಬರ್ ೧೪ ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ರಾಜ್ಯಾದ್ಯಂತ ಏಕಕಾಲದಲ್ಲಿ ೨೦೨೫-೨೬ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಆಯೋಜಿಸಲು ಸರ್ಕಾರ ಉದ್ದೇಶಿಸಿರುವ ಬಗ್ಗೆ ಜಿ.ಪಂ. ಮಿನಿ ವಿಧಾನ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಭೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ಹೇಳಲಾಗುವುದು ಎಂದರು.
ವಿದ್ಯಾರ್ಥಿಗಳ ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪೋಷಕರೊಂದಿಗೆ ಹಂಚಿಕೊಳ್ಳುವುದು. ಪೋ?ಕರು, ಶಿಕ್ಷಕರು ಮತ್ತು ಸ್ಥಳೀಯ ಆಡಳಿತದ ಸಹಯೋಗದಿಂದ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ, ಶಾಲೆಯ ಅವಶ್ಯಕತೆಗಳು, ಸವಾಲುಗಳು ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಪೋ?ಕರ ನಿರೀಕ್ಷೆ, ಸಹಕಾರ ಮತ್ತು ಸಲಹೆಗಳನ್ನು ಸಂಗ್ರಹಿಸುವುದು, ಕೆ.ಪಿ.ಎಸ್. ಪಿ.ಎಂ.ಶ್ರೀ ಹಾಗೂ ಆಯ್ಕೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಿರುವ ದ್ವಿಭಾ? ಮಾಧ್ಯಮ ತರಗತಿಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳ ಬಗ್ಗೆ ಪೋ?ಕರಲ್ಲಿ ಅರಿವು ಮೂಡಿಸುವುದು. ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಶಾಲಾ-ಕಾಲೇಜುಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಿ ಹೆಚ್ಚುವರಿ ಅನುದಾನ ನೀಡಿ ಅಭಿವೃದ್ಧಿಪಡಿಸುತ್ತಿರುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
