Tuesday, July 14, 2026
Homeಕ್ರೈಮ್ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದಲ್ಲಿ ಬಾಲಕಿ ನಾಪತ್ತೆ ಕೇಸ್:‌ ರಕ್ಷಣಾ ಕಾರ್ಯಚರಣೆಗೆ ಅರಣ್ಯ ಸಚಿವರ ಆದೇಶ!

ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದಲ್ಲಿ ಬಾಲಕಿ ನಾಪತ್ತೆ ಕೇಸ್:‌ ರಕ್ಷಣಾ ಕಾರ್ಯಚರಣೆಗೆ ಅರಣ್ಯ ಸಚಿವರ ಆದೇಶ!

Telegram Group
Join Now

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ತೆರಳಿದ್ದ ಕೇರಳದ ಪಾಲಕಾಡ್ ಜಿಲ್ಲೆಯ ಬಾಲಕಿ ಶ್ರೀನಂದಾ ನಾಪತ್ತೆಯಾಗಿರುವ ಘಟನೆ ಬೆನ್ನಲ್ಲೇ, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ತಕ್ಷಣದ ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಿದ್ದಾರೆ.

ನಾಪತ್ತೆಯಾದ ಬಾಲಕಿಯ ಶೋಧಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಪಡೆಗೆ ನೆರವು ನೀಡಲು ನುರಿತ ಅರಣ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಲಾಗಿದೆ. ಚಂದ್ರದ್ರೋಣ ಪರ್ವತದ ಚಾರಣ ಪಥವು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರದಿದ್ದರೂ ಸಹ, ಆ ಪ್ರದೇಶವು ಕಡಿದಾದ ಗುಡ್ಡಗಳು ಮತ್ತು ದಟ್ಟವಾದ ಗಿಡಗಂಟಿಗಳಿಂದ ಕೂಡಿರುವ ಕಾರಣ ಬಾಲಕಿಯ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆಯ ಬೆಂಬಲ ಅತ್ಯಗತ್ಯ ಎಂದು ಸಚಿವರು ತಿಳಿಸಿದ್ದಾರೆ.

ಬಾಲಕಿಯನ್ನು ಶೀಘ್ರವಾಗಿ ಪತ್ತೆಹಚ್ಚಲು ಥರ್ಮಲ್ ಡೋನ್ ಸೇರಿದಂತೆ ಅತ್ಯಾಧುನಿಕ ಉಪಕರಣಗಳನ್ನು ಬಳಸುವಂತೆ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಚಿವರು ಅದೇಶ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments