ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದವರು. ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ.
ಗಂಭೀರ ಗಾಯಗೊಂಡ ಚಾಲಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
