ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಸೆ.3 ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಫಿನಾಡು ಮಲೆನಾಡು ಭಾಗದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯ ಆರ್ಭಟ ಮುಂದುವರೆದಿದೆ. ಶೃಂಗೇರಿ, ಕೊಪ್ಪ, ಎನ್ ಆರ್ ಪುರ , ಮೂಡಿಗೆರೆ , ಕಳಸ ಭಾಗಗಳಲ್ಲಿ ಮಳೆ ಅಬ್ಬರಿಸುತ್ತಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಲ್ಲಿ ಹಲವೆಡೆ ಭಾರೀ ಮಳೆಯಾಗಲಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಸೆಪ್ಟಂಬರ್ 3ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
