Friday, March 27, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಅ.29ರವರೆಗೂ ವಿಪರೀತ ಮಳೆ: ಆರೆಂಜ್ ಅಲರ್ಟ್​ ಘೋಷಣೆ!

ಚಿಕ್ಕಮಗಳೂರು: ಅ.29ರವರೆಗೂ ವಿಪರೀತ ಮಳೆ: ಆರೆಂಜ್ ಅಲರ್ಟ್​ ಘೋಷಣೆ!

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ

ಚಿಕ್ಕಮಗಳೂರು, ಹಾಸನ, ಕೊಡಗು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ, ಕಾರಕಲೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!