Monday, August 4, 2025
!-- afp header code starts here -->
Homeಜಿಲ್ಲಾಸುದ್ದಿಚಿಕ್ಕಮಗಳೂರು: ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಗೆ ಕಾಫಿನಾಡಿಗೆ ನಿರ್ಬಂಧ

ಚಿಕ್ಕಮಗಳೂರು: ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಗೆ ಕಾಫಿನಾಡಿಗೆ ನಿರ್ಬಂಧ

ಚಿಕ್ಕಮಗಳೂರು : ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಗೆ ಕಾಫಿನಾಡಿಗೆ ಒಂದು ತಿಂಗಳ ಕಾಲ ಸಂಪೂರ್ಣ ನಿಷೇಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಪಂಪ್ ವೆಲ್ ಕರೆಸಿ ಬೈಠಕ್ ಹಮ್ಮಿಕೊಂಡಿದ್ದಾರೆ. ಪಂಪ ವೆಲ್ ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿದ್ದಾರೆ ಕೋಮುದ್ವೇಷ ಹರಡುವ ಭಾಷಣ ಮಾಡುವ ಪ್ರವೃತ್ತಿ ಉಳ್ಳವರಾಗಿದ್ದಾರೆ ಇವರ ಪ್ರಚೋದನಾಕಾರಿ ಭಾಷಣದಿಂದ ಗಲಾಟೆ, ಗುಂಪು ಘರ್ಷಣೆ ಸನ್ನಿವೇಶಗಳಿವೆ ಚಿಕ್ಕಮಗಳೂರು ಸೇರಿ ಕೆಲ ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶವಾಗಿದೆ ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಭಂಗ ತರುವ ಸಾಧ್ಯತೆಗಳಿವೆ ಹಾಗಾಗಿ 6-7-25 ರಿಂದ 4-8-25ರ 30 ದಿನಗಳ ಕಾಲ ಜಿಲ್ಲಾಡಳಿತದಿಂದ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ

ಶರಣ್ ಪಂಪ್ ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಭಂಗ ತರುವ ಸಾಧ್ಯತೆಗಳಿವೆ ಎಂದು ತಿಳಿದು ಮುನ್ನೆಚ್ಚರಿಕಾ ಕ್ರಮವಾಗಿ  ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!