Friday, March 27, 2026
Homeಕ್ರೈಮ್ಚಿಕ್ಕಮಗಳೂರು: ಪತಿಯಿಂದಲೇ ಪತ್ನಿಯ ಭೀಕರ ಕೊಲೆ: ಅನಾಥವಾದ 2 ವರ್ಷದ ಮಗು!

ಚಿಕ್ಕಮಗಳೂರು: ಪತಿಯಿಂದಲೇ ಪತ್ನಿಯ ಭೀಕರ ಕೊಲೆ: ಅನಾಥವಾದ 2 ವರ್ಷದ ಮಗು!

ಚಿಕ್ಕಮಗಳೂರು: ಸಂಸಾರದ ಕಲಹದಿಂದ ಬೇಸತ್ತು ಪತಿ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ.

ತನು (25) ಕೊಲೆಯಾದ ಮಹಿಳೆ, ರಮೇಶ್ ಕೊಲೆಗೈದ ಪತಿ. ಮನೆಯ ರೂಮಿನ ತುಂಬೆಲ್ಲ ರಕ್ತ ಚೆಲ್ಲಿದ್ದು, ರಕ್ತದ ಮಡುವಿನಲ್ಲಿ ಪತ್ನಿಯ ಶವ ಪತ್ತೆಯಾಗಿದೆ.

ತನು & ರಮೇಶ್‌ 7 ವರ್ಷಗಳ ಹಿಂದೆ ‌ಮದ್ವೆಯಾಗಿದ್ದರು. ದಂಪತಿಗೆ 6 ವರ್ಷದ ಗಂಡು ಮಗು ಇದೆ. ಗಂಡನೊಂದಿಗೆ ಜಗಳ ಮಾಡಿಕೊಂಡಿದ್ದ ತನು 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದಳು. ಹೀಗಾಗಿ ಇಬ್ಬರ ನಡುವೆ ಕಲ ಇತ್ತು. ಬುಧವಾರ ರಾತ್ರಿ ಕುಡಿದು ಬಂದಿದ್ದ ರಮೇಶ್‌, ಪತ್ನಿಯನ್ನ ಕ್ರೂರವಾಗಿ ಕೊಲೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!