Tuesday, February 10, 2026
Homeಕ್ರೈಮ್ಚಿಕ್ಕಮಗಳೂರು: ಅನಾರೋಗ್ಯದಿಂದ ಕಳಸ ಪೊಲೀಸ್ ಠಾಣೆಯ ಪೇದೆ ನಿಧನ

ಚಿಕ್ಕಮಗಳೂರು: ಅನಾರೋಗ್ಯದಿಂದ ಕಳಸ ಪೊಲೀಸ್ ಠಾಣೆಯ ಪೇದೆ ನಿಧನ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮಾಶಂಕರ್(53) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಪೊಲೀಸ್‌ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಉಮಾಶಂಕರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಹಾಗೆ ಅವರು ಈ ಹಿಂದೆ ಲಕ್ಕವಳ್ಳಿ, ತರಿಕೆರೆ, ಕೊಪ್ಪ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ಸಹ ನಿರ್ವಹಿಸಿದ್ದರು.

ಕಳೆದೆರಡು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೀಡಾದ ಉಮಾಶಂಕರ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!