Friday, June 26, 2026
Homeಕ್ರೈಮ್ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಗುದ್ದಿದ KSRTC ಬಸ್!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಗುದ್ದಿದ KSRTC ಬಸ್!

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ರಾತ್ರಿ 9.30ರ ಸುಮಾರಿಗೆ ಪ್ರಯಾಣಿಕರನ್ನೆಲ್ಲ ಇಳಿಸಿದ ಬಳಿಕ ಬಸ್ ಅನ್ನು ಆಲ್ಟಿಂಗ್ ಮಾಡಲು ತೆರಳುತ್ತಿದ್ದ ವೇಳೆ ಕಡೂರು–ಚಿಕ್ಕಮಗಳೂರು ನಾನ್‌ಸ್ಟಾಪ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಕುವೆಂಪು ಕಲಾಮಂದಿರದ ಕಾಂಪೌಂಡ್‌ಗೆ ಗುದ್ದಿದ ಘಟನೆ ನಡೆದಿದೆ.

ಚಾಲಕನ ಹೇಳಿಕೆಯ ಪ್ರಕಾರ ಬ್ರೇಕ್ ಫೇಲ್ ಆದ ಕಾರಣ ಬಸ್ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಅಪಘಾತದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ.

ಇನ್ನೊಂದು ಪ್ರಮುಖ ಸಂಗತಿ ಎಂದರೆ, ರಾತ್ರಿ ವೇಳೆ ಆಲ್ಟಿಂಗ್‌ಗೆ ಬರುವ ಕೆಲ ಬಸ್ ಚಾಲಕರು ಮತ್ತು ನಿರ್ವಾಹಕರು ಇದೇ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಸದ್ಯ ಘಟನೆ ನಡೆದ ಸಮಯದಲ್ಲಿ ಅಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

ಸ್ಥಳೀಯರು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments