ಚಿಕ್ಕಮಗಳೂರು: ಸಾರಿಗೆ ಸಂಸ್ಥೆಯ ಬಸ್‌ಗಳ ಸರಿಯಾದ ನಿರ್ವಹಣೆ ಇಲ್ಲದಿರುವುದು ಪ್ರಯಾಣಿಕರಿಗೆ ಆಗಾಗ ಸಂಕಷ್ಟ ತಂದೊಡ್ಡುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ, ಚಿಕ್ಕಮಗಳೂರು ತಾಲೂಕಿನ ಕೈಮರ ಸಮೀಪ ದಾರಿ ಮಧ್ಯೆ KSRTC ಬಸ್ ಕೆಟ್ಟು ನಿಂತು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.
ಹೌದು .. ಕೆಎಸ್ಆರ್ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ನ್ನು ಸ್ಟಾರ್ಟ್ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ. ಕೊನೆಗೆ ಪ್ರಯಾಣಿಕರೇ ಇಳಿದು ತಳ್ಳಿದ್ದಾರೆ. ಚಿಕ್ಕಮಗಳೂರು ನಗರದಿಂದ ದೇವೀರಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದ ಈ ಬಸ್ ಏಕಾಏಕಿ ದಾರಿ ಮಧ್ಯ ನಿಂತಿದೆ. ಎಷ್ಟೇ ಪ್ರಯತ್ನಿಸಿದರೂ ಸ್ಟಾರ್ಟ್ ಆಗಿಲ್ಲ. ಕೊನೆಗೆ ಎಲ್ಲರನ್ನು ಬಸ್ಸಿನಿಂದ ಕೇಳಗೆ ಇಳಿಸಿ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಹಿಂದಕ್ಕೆ ತಳ್ಳಿದ್ದಾರೆ.
ಈ ಮಾರ್ಗದಲ್ಲಿ ಪ್ರತಿ ಬಾರಿ ಇದೇ ರೀತಿ ಸಮಸ್ಯೆ. ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದ ಇಲಾಖೆ. ಈ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.
