Saturday, August 8, 2026
Homeಕ್ರೈಮ್ಚಿಕ್ಕಮಗಳೂರು: ಜಮೀನಿನ ಖಾತೆ ಬದಲಾವಣೆ: ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

ಚಿಕ್ಕಮಗಳೂರು: ಜಮೀನಿನ ಖಾತೆ ಬದಲಾವಣೆ: ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

Telegram Group
Join Now

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರೆವೆನ್ಯೂ ಇನ್ಸ್‌ಪೆಕ್ಟ‌ರ್ ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಂತೋಷ್  ಇಬ್ಬರು ಸೇರಿ ರೈತರೊಬ್ಬರಿಂದ 30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ನೀಡಲು ಇಚ್ಛಿಸದ ರೈತರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಬುಧವಾರ ಲಂಚದ ಹಣ ಪಡೆಯುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಪ್ರತ್ಯಕ್ಷವಾಗಿ ಸೆರೆ ಹಿಡಿದಿದ್ದಾರೆ.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪೂರ್ವಭಾವಿಯಾಗಿ ಕಾರ್ಯಾಚರಣೆ ರೂಪಿಸಿ, ಬುಧವಾರ ತರೀಕೆರೆ ತಾಲೂಕು ಕಚೇರಿಯಲ್ಲಿ ದಾಳಿ ನಡೆಸಿದರು. ರೈತನಿಂದ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಲಂಚದ ಹಣವನ್ನು ಸಹ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ತಂಡದ ಇತರ ಅಧಿಕಾರಿಗಳು ಸಹ ಭಾಗವಹಿಸಿದ್ದರು. ಸದ್ಯ ಇಬ್ಬರು ಆರೋಪಿ ಅಧಿಕಾರಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಲಂಚದ ಬೇಡಿಕೆ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ದಿಕ್ಕಿನಲ್ಲಿಯೂ ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments