Monday, February 9, 2026
Homeಕ್ರೈಮ್ಚಿಕ್ಕಮಗಳೂರು: ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿಕ್ಕಮಗಳೂರು: ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದಲ್ಲಿರುವ ಮನೆ.

ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ‌ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ ಘೋಷಣೆ ಮಾಡದ ದೂರು ನೀಡಲಾಗಿತ್ತು.

ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್‌ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!