Friday, March 27, 2026
Homeಕ್ರೈಮ್ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು: ನಗರದ ಹೃದಯಭಾಗದಲ್ಲಿರುವ ಐ.ಜಿ. ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಸಂಭವಿಸಿದೆ.

ನಗರದ ಪ್ರಮುಖ ರಸ್ತೆಯಾದ ಐ.ಜಿ. ರಸ್ತೆಯಲ್ಲಿ ಚಾಲಕನ ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲೇ ನಿಂತಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಆಘಾತಕಾರಿ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಅಪಘಾತ ಸಂಭವಿಸಿದಾಗ ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದರು. ಡಿಕ್ಕಿಯಾದ ತಕ್ಷಣ ಕಾರಿನ ಏರ್ ಬ್ಯಾಗ್ ಸರಿಯಾದ ಸಮಯಕ್ಕೆ ತೆರೆದುಕೊಂಡಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದ ಇಬ್ಬರಿಗೂ ಕೇವಲ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!