ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯಲ್ಲಿರುವ ಕೋಳಿ, ಕುರಿ, ಮೀನು ಮಾರಾಟಗಾರರು ಹಾಗೂ ಮಾಂಸಹಾರಿ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರು ಇಂದು ಪ್ರಾಣಿವಧೆಯನ್ನು ಮಾಡುವಂತಿಲ್ಲ.
ಹೌದು .. ಟಿಎಲ್ ವ್ಯಾಸ್ ವಾನಿ ಅವರ ಜನ್ಮದಿನದ ಪ್ರಯುಕ್ತ ಕಡ್ಡಾಯವಾಗಿ ಪ್ರಾಣಿವಧೆ ಮಾಡುವುದನ್ನು ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಳಿ, ಕುರಿ, ಮೀನು ಮಾಂಸ ಅಂಗಡಿಗಳು ಮತ್ತು ಮಾಂಸದ ಹೋಟೆಲ್ ಗಳು ಈ ದಿನದಂದು ತೆರೆಯುವಂತಿಲ್ಲ. ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುವವರು ಮತ್ತು ಮಾಂಸಾಹಾರಿ ಹೋಟೆಲ್ ಮಾಲೀಕರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
