Wednesday, August 12, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕಿ ನಯನಾ ಮೋಟಮ್ಮ ಸಭೆ: ಕ್ಷೇತ್ರದ ವಿವಿಧ ಸಮಸ್ಯೆಗಳ ಬಗ್ಗೆ...

ಚಿಕ್ಕಮಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕಿ ನಯನಾ ಮೋಟಮ್ಮ ಸಭೆ: ಕ್ಷೇತ್ರದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ!

Telegram Group
Join Now

ಚಿಕ್ಕಮಗಳೂರು : ಜಿಲ್ಲಾಧಿಕಾರಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವಿವಿಧ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಾಗಿಯಾದ ಶಾಸಕಿ ನಯನಾ ಮೋಟಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ವಿಸ್ತ್ರತವಾಗಿ ಚರ್ಚಿಸಿದರು.

ಕ್ಷೇತ್ರದ ಉದ್ದಗಲಕ್ಕೂ ಸಾರ್ವಜನಿಕರಿಂದ ಕೇಳಿಬಂದಿರುವ ದೂರುಗಳು ಮತ್ತು ಸ್ಥಳೀಯ ಅಗತ್ಯತೆಗಳನ್ನು ಮನಗಂಡು, ಅವುಗಳಿಗೆ ಶೀಘ್ರವೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಈ ಸಮಾಲೋಚನೆಯಲ್ಲಿ, ಕ್ಷೇತ್ರದ ಮೂಲಭೂತ ಸೌಕರ್ಯಗಳ ವೃದ್ಧಿ, ರಸ್ತೆ ಸಂಪರ್ಕ ಹಾಗೂ ಕುಡಿಯುವ ನೀರಿನ ಯೋಜನೆಗಳ ಬಗ್ಗೆ ವಿಶೇಷ ಒತ್ತು ನೀಡಲಾಯಿತು.

ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಲು ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಾಕೀತು ಮಾಡಿದರು. ಕ್ಷೇತ್ರದ ಪ್ರಗತಿಗೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಲು ಮತ್ತು ಇಲಾಖೆಗಳ ನಡುವೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಈ ಸಭೆಯಲ್ಲಿ ನಿರ್ಧರಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments