Wednesday, March 18, 2026
Homeಕ್ರೈಮ್ಚಿಕ್ಕಮಗಳೂರು: ಕಲುಷಿತ ಆಹಾರ ಸೇವನೆ: 15ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು!

ಚಿಕ್ಕಮಗಳೂರು: ಕಲುಷಿತ ಆಹಾರ ಸೇವನೆ: 15ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು!

ಚಿಕ್ಕಮಗಳೂರು: ನಗರದಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ ಸುಮಾರು 15ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಆತಂಕ ಮೂಡಿಸಿದೆ.

ಹೌದು .. ನಗರದ ಖಾಸಗಿ ಹೋಟೆಲ್‌ ಒಂದರಲ್ಲಿ ಆಹಾರ ಸೇವಿಸಿದ ಸುಮಾರು 15ಕ್ಕೂ ಅಧಿಕ ಮಂದಿ ಪುಡ್‌ ಪಾಯಿಸನ್‌ ನಿಂದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವುದು ಕಂಡು ಬಂದಿದೆ.

ಬಹುತೇಕರು ಒಂದೇ ಹೋಟೆಲ್‌ನಿಂದ ಆಹಾರ ಸೇವನೆ ಮಾಡಿದ್ದಾರೆ. ಹೀಗಾಗಿ, ಆ ಹೋಟೆಲ್‌ನಿಂದ ಆಹಾರ ಪದಾರ್ಥಗಳ ಮಾದರಿಯನ್ನು ಸಂಗ್ರಹಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ಪರೀಕ್ಷಾ ವರದಿ ಬಂದ ಬಳಿಕ ಈ ಕುರಿತು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ.

ಈ ಕುರಿತು ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಭರತ್‌, ಪುಡ್‌ ಪಾಯಿಜನ್‌ ನಿಂದ ದಾಖಲಾದ ಬಹುತೇಕರು ಆಸ್ಪತ್ರೆಯಿಂದ ಮನೆಗೆ ವಾಪಾಸ್‌ ಆಗಿದ್ದಾರೆ. ಕೆಲವರಿಗೆ ಚಿಕಿತ್ಸೆ ಮುಂದುವರೆದಿದೆ. ಒಂದೇ ಕಡೆ ಆಹಾರ ಸೇವೆ ಮಾಡಿದ ಪ್ರಕರಣ ಹೆಚ್ಚಾಗಿರುವುದರಿಂದ ಖಾಸಗಿ ಹೋಟೆಲ್‌ನ ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇನ್ನೂ ಬೇಸಿಗೆ ಸಮಯದಲ್ಲಿ ಸಾಮಾನ್ಯವಾಗಿ ಪುಡ್‌ ಪಾಯಿಸನ್ ಪ್ರಕರಣ ಕಂಡು ಬರುತ್ತವೆ. ಅದು ಆಹಾರ ಮತ್ತು ನೀರು ಎರೆಡರಿಂದಲ್ಲೂ ಆಗುವ ಸಾಧ್ಯತೆ ಇರುತ್ತದೆ ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!