Wednesday, March 25, 2026
Homeಕ್ರೈಮ್ಚಿಕ್ಕಮಗಳೂರು: ದತ್ತ ಜಯಂತಿಗೆ 6 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಯೋಜನೆ: ಉತ್ತಮ ಊಟೋಪಚಾರದ ವ್ಯವಸ್ಥೆ

ಚಿಕ್ಕಮಗಳೂರು: ದತ್ತ ಜಯಂತಿಗೆ 6 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಯೋಜನೆ: ಉತ್ತಮ ಊಟೋಪಚಾರದ ವ್ಯವಸ್ಥೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಸಂಭ್ರಮ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ದತ್ತ ಜಯಂತಿ ಅಂಗವಾಗಿ ಜಿಲ್ಲೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಈ ಭದ್ರತಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 6,200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಬೃಹತ್ ಪೊಲೀಸ್ ಪಡೆಯ ಭದ್ರತಾ ಕಾರ್ಯದ ಜೊತೆಗೆ, ಅವರಿಗೆ ಊಟೋಪಚಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾಡಳಿತ ವಿಶೇಷ ಕ್ರಮಗಳನ್ನು ಕೈಗೊಂಡಿತ್ತು.

ನೂರಾರು ವಾಹನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಈ ಎಲ್ಲ ಪೊಲೀಸರಿಗಾಗಿ ಪ್ರತಿ ಹೊತ್ತಿಗೂ ಬರೋಬ್ಬರಿ 3,500ಕ್ಕೂ ಹೆಚ್ಚು ಸಿಬ್ಬಂದಿಗೆ ಆಗುವಷ್ಟು ಪ್ರಮಾಣದಲ್ಲಿ ಆಹಾರವನ್ನು ತಯಾರಿಸಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಕಳೆದ ಮೂರು ದಿನಗಳಿಂದಲೇ ಅಡುಗೆ ತಯಾರಿಯ ಸಿದ್ಧತಾ ಕಾರ್ಯ ಭರದಿಂದ ಸಾಗಿದ್ದು,

ಕಾರ್ತಿಕ್ ಅವರ ನೇತೃತ್ವದಲ್ಲಿ ಸುಮಾರು 30 ಬಾಣಸಿಗರ ತಂಡ ಈ ಗುರುತರ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ. ಪೊಲೀಸ್ ಸಿಬ್ಬಂದಿಗೆ ಪ್ರತಿದಿನವೂ ಬೇರೆ ಬೇರೆ ಬಗೆಯ ವಿಶೇಷ ಮೆನುವನ್ನು ಸಿದ್ಧಪಡಿಸಲಾಗುತ್ತಿದೆ. ಈ ಮೆನುವಿನಲ್ಲಿ ವಾಂಗಿಬಾತ್, ಬಿಸಿಬೇಳೆ ಬಾತ್, ಚಿತ್ರಾನ್ನ, ಗೀ ರೈಸ್ ಪಲಾವ್, ಚಪಾತಿ, ಅನ್ನ ಮತ್ತು ಸಾಂಬಾರ್ ಸೇರಿದಂತೆ ಇತರೆ ಭಕ್ಷ್ಯಗಳನ್ನು ತಯಾರಿಸಿ ವಿತರಿಸಲಾಗಿದೆ.

ಅಡುಗೆ ತಯಾರಾದ ನಂತರ, ಸಿದ್ಧಪಡಿಸಿದ ಆಹಾರವನ್ನು ಪ್ಯಾಕ್ ಮಾಡುವ ಕಾರ್ಯಕ್ಕಾಗಿ 40ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ. ಹೀಗೆ ಪ್ಯಾಕ್ ಮಾಡಿದ ಆಹಾರದ ಪೊಟ್ಟಣಗಳನ್ನು ಕರ್ತವ್ಯ ನಿರ್ವಹಿಸುವ ಸ್ಥಳಗಳಿಗೆ ಸಕಾಲದಲ್ಲಿ ತಲುಪಿಸಲು ವಾಹನಗಳ ಮೂಲಕ ವ್ಯವಸ್ಥೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!