Tuesday, July 21, 2026
Homeಕ್ರೈಮ್ಚಿಕ್ಕಮಗಳೂರು: ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನ ಬಂದ್‌ : ಕಾರಣವೇನು?

ಚಿಕ್ಕಮಗಳೂರು: ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನ ಬಂದ್‌ : ಕಾರಣವೇನು?

Telegram Group
Join Now

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು ಬಂದ್ ಮಾಡಿಸಿದರು.

ಕಂದಾಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದರು.

ಏಪ್ರಿಲ್ 17ರಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಚಿತ್ರಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಉಪಕರಣಗಳು ದುರಸ್ಥಿಯಲ್ಲಿರುವುದು ಕಂಡು ಬಂದಿತ್ತು.

ಹೊಸ ಮಾದರಿಯ ಅಗ್ನಿನಂದಕ ಉಪಕರಣಗಳನ್ನು ಅಳವಡಿಸಿಕೊಳ್ಳಬೇಕು. ಅಳವಡಿಕೆ ಮಾಡಿರುವ ಬಗ್ಗೆ 5 ದಿನದೊಳಗೆ ದೃಢೀಕರಣ ನೀಡಬೇಕು ಎಂದು ಸೂಚನಾ ಪತ್ರ ನೀಡಿದ್ದರು.

ಈವರೆಗೆ ದೃಢೀಕರಣ ಪತ್ರ ಸಲ್ಲಿಸಿ ಪರವಾನಗಿ ನವೀಕರಿಸಿಕೊಳ್ಳದ ಕಾರಣ ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments