ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಹೇಳಿದರು.
ಇಂದು ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ೨೦೨೫-೨೬ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕುರಿತ ಜಿಲ್ಲಾ ಮಟ್ಟದ ಸಂಘ ಸಂಸ್ಥೆಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ ವಲಸೆಗಾರರು, ಪಡಿತರ ಚೀಟಿ ಇಲ್ಲದವರು, ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಯಾವುದೇ ಕುಟುಂಬದವರಿದ್ದರೂ ಅಂತವರೂ ಕೂಡ ಸಮೀಕ್ಷೆಗೆ ಒಳಪಡಲಿದ್ದಾರೆ. ಆಧಾರ ಕಾರ್ಡ್ ಹೊಂದಿದ್ದ ಬೇರೆ ರಾಜ್ಯ ಬೇರೆ ಜಿಲ್ಲೆಯ ಕುಟುಂಬದವರು ನಮ್ಮ ಜಿಲ್ಲೆಯಲ್ಲಿ ವಾಸಿಸುತ್ತಿದ್ದರೆ ಅಂತವರನ್ನು ಸಮೀಕ್ಷೆಗೆ ಒಳಪಡಿಸಿ ಅವರು ಈ ಮನೆಯಲ್ಲಿ ವಾಸವಿರುವ ಬಗ್ಗೆ ಗುರುತಿಸಲಾಗುತ್ತದೆ ಎಂದ ಅವರು ಮನೆ-ಮನೆ ಸಮೀಕ್ಷೆಯನ್ನು ಸೆಪ್ಟೆಂಬರ್ ೨೨ ರಿಂದ ಪ್ರಾರಂಭವಾಗಿ ಆಕ್ಟೋಬರ್ ೭ ರವೆರೆಗ ನಡೆಯುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಮೀಕ್ಷೆಗೆ ಒಳಪಡುವ ವಿದ್ಯುತ್ ಮೀಟರ್‌ನ ಆರ್.ಆರ್ ಸಂಖ್ಯೆ ಇರುವ ೩,೩೧,೭೪೦ ಕುಟುಂಬಗಳಿದ್ದು, ೨,೬೬೮ಸಮೀಕ್ಷೆದಾರರು ಸಮೀಕ್ಷ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮೊಬೈಲ್ ಆಪ್ ಮುಖಾಂತರ ಸಮೀಕ್ಷೆಯ ದತ್ತಾಂಶಗಳನ್ನು ಸಂಗ್ರಹಿಸಲಾಗುವುದು ಹಾಗೂ ಪ್ರಾಶ್ನವಳಿ ಸುಮಾರು ೬೦ ಪ್ರಶ್ನೆಗಳಿರುತ್ತದೆ ಎಂದು ಹೇಳಿದರು.
ಈಗಾಗಲೇ ಮೆಸ್ಕಾಂ ವತಿಯಿಂದ ಪ್ರತಿ ಕುಟುಂಬಕ್ಕೆ UಊIಆ (Uಟಿique ಊousehoಟಜ Iಆ) ನಂಬರನ್ನು ಸೃಜಿಸಿ ಪ್ರತಿ ಮನೆಗೆ ಸ್ಟಿಕ್ಕರ್ ಅಂಟಿಸಲಾಗಿದೆ ಮತ್ತು ಇದನ್ನು ಉeo ಣಚಿg ಮಾಡಲಾಗುತ್ತಿದೆ. ಒಂದು ವೇಳೆ UಊIಆ ಸ್ಪೀಕರ್ ನ್ನು ಯಾವುದೇ ಮನೆಗೆ ಅಂಟಿಸಿಲ್ಲವಾದಲ್ಲಿ ಕೂಡ UಊIಆ ಯನ್ನು ಸೃಜಿಸಿಕೊಂಡು ಗಣತಿದಾರರು ಸಮೀಕ್ಷೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿದ್ಯುತ್ ಸಂಪರ್ಕವಿಲ್ಲದೆ ಇರುವ ಮನೆಗಳ ವಿವರವನ್ನು ನೀಡಲು ತಿಳಿಸಲಾಗಿದೆ. ಈ ಮನೆಗಳನ್ನು ಸಹ ಗಿಂ / Pಆಔ ಗಳ ಮೂಲಕ ಉeo ಣಚಿg ಮಾಡಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಇಂಟರ್ ನೆಟ್ ಸೌಲಭ್ಯ ಇಲ್ಲದೇ ಇರುವ ಪ್ರದೇಶಗಳಲ್ಲಿ ಸರ್ಕಾರ ಗುರುತಿಸುವ ಸರ್ಕಾರಿ ಕಟ್ಟಡಗಳಲ್ಲಿ ಸಮೀಕ್ಷೆ ಕಾರ್ಯವನ್ನು ನಡೆಸಲಾಗುವುದು. ಅಂತಹ ಸ್ಥಳಗಳಿಗೆ ಕುಟುಂಬದ ಮಾಹಿತಿದಾರರೊಬ್ಬರನ್ನು ಮಾಹಿತಿಯೊಂದಿಗೆ ಕರೆ ತರಲಾಗುವುದು ಎಂದ ಅವರು ಸಮೀಕ್ಷೆಗೆ ದಸರಾ ರಜೆ ಇರುವುದರಿಂದ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದ ಅವರು ಶಿಕ್ಷಕರು ಕೆಲಸ ಮಾಡುವ ಗ್ರಾಮ / ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳು ಕ್ರಮ ವಹಿಸಲಾಗುವುದು ಎಂದರು.
ಸಮೀಕ್ಷೆದರಾದ ಶಿಕ್ಷಕರಿಗೆ ೧೫೦ ಮನೆಗಳನ್ನು ನಿಗಧಿ ಪಡಿಸಲಾಗುತ್ತದೆ. ಮಲ್ನಾಡು ಭಾಗದಲ್ಲಿ ಮನೆಗಳೂ ದೂರ-ದೂರ ವಿರುವುದರಿಂದ ಒಬ್ಬರಿಗೆ ೧೦೦ ಮನೆಗಳನ್ನು ನಿಗಧಿಪಡಿಸಿ ಸಮೀಕ್ಷೆ ಮಾಡಲಾಗುತ್ತದೆ. ಪ್ರತಿ ೫೦ ಶಿಕ್ಷಕರಿಗೆ ಒಬ್ಬರು ತರಬೇತಿದಾರರಿರುತ್ತಾರೆ ಪ್ರತಿ ೨೦ ಶಿಕ್ಷಕರಿಗೆ ಒಬ್ಬರು ಮೇಲ್ವಿಚಾರಕರಿರುತ್ತಾರೆ ೫೦ ಮೇಲ್ವಿಚಾರಕರಿಗೆ ಒಬ್ಬ ಮಾಸ್ಟರ್ ತರಬೇತಿದಾರರಿರುತ್ತಾರೆ ಎಂದು ಹೇಳಿದರು.
ಮನೆ-ಮನೆಗೆ ಹೋಗಿ ಈ ಸಮೀಕ್ಷೆಯ ಬಗ್ಗೆ ಅರಿವು ಮೂಡಿಸುವಂತೆ ಮತ್ತು ಅವರಿಗೆ ಯಾವ ರೀತಿ ಪ್ರಶ್ನೆಗಳಿರುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿ ಸಮೀಕ್ಷಗೆ ಬಂದವರಿಗೆ ಸುಲಭವಾಗುವಂತೆ ಮಾಡಲು ಈ ಸಮೀಕ್ಷೆಗೆ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪಾಲ್ಗೋಳ್ಳುತ್ತಾರೆ ಎಂದು ತಿಳಿಸಿದರು. ಗ್ರಾಮ ಆಡಳಿತಾಧಿಕಾರಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಆರ್ ಆರ್ ನಂಬರ್ ಹೊಂದಿಲ್ಲದೇ ಇರುವ (ವಿದ್ಯುತ್‌ಚ್ಛಕ್ತಿ ಸಂಪರ್ಕವಿಲ್ಲದಿರುವ ಮನೆಗಳನ್ನು ಪಟ್ಟಿ ಮಾಡಿ, ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಜೊತೆಗೆ ಜಿಯೋ-ಟ್ಯಾಗಿಂಗ್ ಮಾಡುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.
ಮನೆಯ ಮುಖ್ಯ ದ್ವಾರದಲ್ಲಿ ಅಂಟಿಸಿರುವ ಸ್ಪೀಕರ್‌ಗಳನ್ನು ಸಾರ್ವಜನಿಕರು ಗಣತಿ ಕಾರ್ಯ ಮುಗಿಯುವವರೆಗೂ ಗೀಚುವುದಾಗಲಿ, ಕಿತ್ತುಹಾಕುವುದಾಗಲಿ ಮಾಡಬಾರದು ಜೊತಗೆ ಇದು ನಮ್ಮದೆ ಸಮೀಕ್ಷೆ ನಾವೆಲ್ಲರೂ ಜವಾಬ್ದಾರಿಯೊಂದಿಗೆ ಪಾಲ್ಗೊಂಡು ಸಮೀಕ್ಷೆಗೆ ಬರುವ ಶಿಕ್ಷಕರಿಗೆ ತಮ್ಮ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಕೋರಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಮಾತನಾಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗುಣಮಟ್ಟದ ಡೇಟಾ ತುಂಬಾ ಮುಖ್ಯವಾಗಿದೆ. ಮುಂದಿನ ದಿನದಲ್ಲಿ ಈ ಡೇಟಾಗಳು ಬೇರೆ-ಬೇರೆ ವಿಷಯಗಳಿಗೆ ಬುನಾದಿಯಾಗುವುದರಿಂದ ಮುಂಖಡರು ತಮ್ಮ ವ್ಯಾಪ್ತಿಯ ಜನರಿಗೆ ಈ ಸಮೀಕ್ಷೆ ಬಗ್ಗೆ ಅರಿವು ಮೂಡಿಸಬೇಕು ೬೦ ಪ್ರಶ್ನೆಗಳಿರುತ್ತದೆ ಅದರ ಬಗ್ಗೆ ಮೊದಲೇ ಉತ್ತರಗಳನ್ನು ಸಿದ್ದಪಡಿಸಿಕೊಳ್ಳುವಂತೆ ತಿಳಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಿ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದ ಅವರು ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು ೬೩೬೧೭-೮೯೫೭೯ ಈ ನಂಬರ್ ವಾಟ್ಸಪ್ ಮುಖಾಂತರ ಊi ಎಂದು ಸಂದೇಶವನ್ನು ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು. ಈಗಾಗಲೇ ಗ್ರಾಮ ಪಂಚಾಯಿತಿ ಹಾಗು ನಗರಗಳಲ್ಲಿ ಸ್ವಚ್ಚವಾಹಿನಿ ಆಟೋಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿಯ ಕಾಂತರಾಜ್ ಸಮೀಕ್ಷೆ ಕುರಿತು ಮಾತನಾಡಿದರು.c
