ಚಿಕ್ಕಮಗಳೂರು: ಹೊಸದಾಗಿ ರಚನೆಯಾಗಿರುವ ಅಜ್ಜಂಪುರ ಪಟ್ಟಣ ಪಂಚಾಯಿತಿಯ ನಂ. 1ರಿಂದ 12 ವಾರ್ಡ್ಗಳ ಕೌನ್ಸಿಲರುಗಳ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ಅದರಂತೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ರಂದು ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.
ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನವಾಗಿದೆ. ಮತದಾನ ಅಗತ್ಯವಿದ್ದರೆ ಆಗಸ್ಟ್ 17 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನವನ್ನು ನಡೆಸಲಾಗುವುದು.
ಮರು ಮತದಾನ ಅಗತ್ಯವಿದ್ದಲ್ಲಿ ಆಗಸ್ಟ್ 19 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು.
ಆಗಸ್ಟ್ 20 ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರದಲ್ಲಿ ಮತಗಳ ಎಣಿಕೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.