Tuesday, August 11, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಪೋಕ್ಸೋ ಆರೋಪಿಗೆ 3 ವರ್ಷ ಜೈಲು ಶಿಕ್ಷೆ, ದಂಡ!

ಚಿಕ್ಕಮಗಳೂರು: ಪೋಕ್ಸೋ ಆರೋಪಿಗೆ 3 ವರ್ಷ ಜೈಲು ಶಿಕ್ಷೆ, ದಂಡ!

Telegram Group
Join Now

ಚಿಕ್ಕಮಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 3 ವರ್ಷ ಸಜೆ ಮತ್ತು ರೂ. 20,000/- ದಂಡ ವಿಧಿಸಿ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ರಾಜು ಎಸ್ (50) ಆರೋಪಿ. ಈತನ ವಿರುದ್ಧ ಆರೋಪ ಸಾಭೀತಾದ ಹಿನ್ನಲೆಯಲ್ಲಿ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷ ಸಜೆ ಮತ್ತು ರೂ. 20,000/- ದಂಡ ವಿಧಿಸಿದ್ದು, ನೊಂದ ಬಾಲಕಿಗೆ ರೂ. 1,00,000/- ಪರಿಹಾರ ನೀಡುವಂತೆ ಆದೇಶಿಸಿದೆ.

ಕಡೂರು ವೃತ್ತದ ರಫೀಕ್ ಎಂ ಪ್ರಕರಣದ ತನಿಖೆಯನ್ನು ನಡೆಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಭರತ್ ಕುಮಾರ್ ರವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಎ.ಎಸ್.ಐ. ದೇವೇಂದ್ರ ಕುಮಾರ್ ಎಸ್ ಓ ರವರು ನ್ಯಾಯಾಲಯದ ಕರ್ತವ್ಯ ಮತ್ತು ಪೊಲೀಸ್ ಸಿಬ್ಬಂದಿಗಳಾದ ವಸಂತ್ ಕುಮಾರ್ ಮತ್ತು ನಜೀರ್ ಬಿ ಎ ರವರು ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments