Wednesday, April 1, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಸಾರ್ವಜನಿಕರು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು: ಡಿಸಿ ಎನ್.ಎಂ.ನಾಗರಾಜ್

ಚಿಕ್ಕಮಗಳೂರು: ಸಾರ್ವಜನಿಕರು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು: ಡಿಸಿ ಎನ್.ಎಂ.ನಾಗರಾಜ್

ಚಿಕ್ಕಮಗಳೂರು: ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು ಮತ್ತು ಸಾಂಸ್ಕೃತಿಕ ವೈವಿಧತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಭಾರತದ ಮೊದಲ ಡಿಜಿಟಲ್ ಜನಗಣತಿ ಮತ್ತು 16ನೇ ಜನಗಣತಿಯು ಏಪ್ರಿಲ್‌ನಿಂದ ಎರಡು ಹಂತದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜನಗಣತಿ 2026ರ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಅವರು ಮಾತನಾಡಿ  ಜನಗಣತಿಯ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ ಎಂದರು

ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ ಗಣತಿ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವಯಂ ಗಣತಿ ವೆಬ್ ಪೋರ್ಟಲ್ ಬಳಸಿಕೊಂಡು ತಮ್ಮ ಕುಟುಂಬದ ಸಾಮಾನ್ಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 1 ರಿಂದ 15 ರವರೆಗೆ ಸ್ವಯಂ ಗಣತಿ ರಿಪೋರ್ಟರ್ ಲಭ್ಯವಿದ್ದು, ಮೊಬೈಲ್, ಡೆಸ್ಕ್‌ಟಾಪ್, ಲ್ಯಾಪ್‌ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿಯಾಗಲಿದೆ ಎಂದರು.

ಮಾಹಿತಿ ಭರ್ತಿಯ ವೇಳೆ ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲ್ಲೂಕು, ಪಟ್ಟಣ/ಗ್ರಾಮ/ ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್‌ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.

ಈಗಾಗಲೇ ಗಣತಿಯಲ್ಲಿ ಭಾಗವಹಿಸುವ ಎಲ್ಲರಿಗೂ ತರಬೇತಿ ನೀಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2528 ಬ್ಲಾಕ್‌ಗಳನ್ನು ಗುರುತಿಸಲಾಗಿದೆ. 2220 ಗಣತಿದಾರರು ಹಾಗೂ 380 ಮೇಲ್ವಿಚಾರಕರನ್ನು ಗಣತಿ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!