ಮೂಡಿಗೆರೆ: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರೆದಿದ್ದು ಮಲೆನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ.
ಮೂಡಿಗೆರೆ ತಾಲೂಕಿನ ಜಾಣಿಗೆ ಗ್ರಾಮದಲ್ಲಿ ಬಿರುಗಾಳಿ, ಮಳೆಯ ಆರ್ಭಟಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಯ ನೂರಾರು ಹೆಂಚುಗಳು ಹಾರಿ ಹೋಗಿವೆ. ಭಾರೀ ಗಾಳಿಯ ರಭಸಕ್ಕೆ ಶಾಲೆಯ ಮೇಲ್ಛಾವಣಿಯ ಹೆಂಚುಗಳು ಕಿತ್ತುಹೋಗಿವೆ.
ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿರುವುದರಿಂದ ಜನಜೀವನದ ಮೇಲೂ ಪರಿಣಾಮ ಉಂಟಾಗಿದೆ.
