ಚಿಕ್ಕಮಗಳೂರು: ನಗರದ ತಾಲೂಕು ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ,ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಾನವ ಕಳ್ಳ ಸಾಗಣೆಯ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಜನಜಾಗೃತ ಜಾಥವನ್ನು ಹಿರಿಯ ಸಿವಿಲ್ ನ್ಯಾಯಧೀಶರಾದ ವಿ.ಹನುಮಂತಪ್ಪ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮಾನವ ಕಳ್ಳ ಸಾಗಾಣೆಯಂತಹ ಹೀನ ಕೃತ್ಯದಿಂದ ಅಪರಾಧ ಕೃತ್ಯದಿಂದ ಈ ಜಿಲ್ಲೆಯನ್ನು ಮುಕ್ತಗೊಳಿಸಲು ಪ್ರಾಮಾಣಿಕವಾದ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ತಾಲೂಕು ಕಚೇರಿಯಿಂದ ಆಜಾದ್ ವೃತ್ತದವರೆಗೂ ಜಾಥ ನಡೆಸಲಾಯಿತು