Friday, March 20, 2026
Homeಕ್ರೈಮ್ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ ಆರು ಜನರ ಗಡಿಪಾರಿಗೆ ಶಿಫಾರಸ್ಸು: ಹಿಂದೂ ಮುಖಂಡರ...

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ ಆರು ಜನರ ಗಡಿಪಾರಿಗೆ ಶಿಫಾರಸ್ಸು: ಹಿಂದೂ ಮುಖಂಡರ ತೀವ್ರ ಆಕ್ರೋಶ

ಚಿಕ್ಕಮಗಳೂರು: ಜಿಲ್ಲೆಯ ಹಿಂದೂ ಮುಖಂಡರು ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪದಾಧಿಕಾರಿಗಳನ್ನು ಗಡಿಪಾರು ಮಾಡಲು ಜಿಲ್ಲಾ ಪೊಲೀಸ್‌ ಇಲಾಖೆಯ ಉಪವಿಭಾಗಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದೆ.

ಹೌದು .. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ಆರು ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಉಪವಿಭಾಗಾಧಿಕಾರಿಗಳಿಗೆ ಶಿಫಾರಸ್ಸು ಪತ್ರ ಕಳುಹಿಸಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಹಾಗೂ ಭಜರಂಗದಳದ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಹೆಸರುಗಳಿದ್ದು ಇವರ ಜೊತೆ ನಾಲ್ವರು ಮುಸ್ಲಿಂ ಮುಖಂಡರಾದ ಜೋಹರ್, ಚಾಂದ್, ಇಬ್ರಾಹಿಂ ಮತ್ತು ಇಮ್ರಾನ್ ಅವರ ಹೆಸರನ್ನೂ ಶಿಫಾರಸ್ಸಿನಲ್ಲಿ ಸೇರಿಸಲಾಗಿದೆ.

ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಹಳೆಯ ಪ್ರಕರಣಗಳನ್ನು ಉಲ್ಲೇಖಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಹಾಗೆ ಸಂತೋಷ್ ಕೋಟ್ಯಾನ್ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಆರು ಜನರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಿದ ಬಳಿಕ ಅಂತಿಮ ಆದೇಶ ಹೊರಡಿಸಲಿದ್ದಾರೆ.ಆದರೆ ಯುಗಾದಿ ಹಬ್ಬದ ಸನ್ನಿಹದಲ್ಲೇ ಈ ರೀತಿ ಶಾಕ್‌ ನೀಡಿದ್ದು ಹಿಂದೂ ಮುಖಂಡರ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!