ಚಿಕ್ಕಮಗಳೂರು: ನಗರದಲ್ಲಿ ಡ್ರಗ್ಸ್ ವಿರುದ್ಧ ಸಮರ ಮುಂದುವರೆದಿದ್ದು ಗಾಂಜಾ ಮಾರಾಟ ಮಾಡಲು ಇಟ್ಟುಕೊಂಡಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ

ಚಿಕ್ಕಮಗಳೂರು ನಗರದ ಸಂತೆ ಮಾರ್ಕೇಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಇಟ್ಟುಕೊಂಡಿದ್ದ ಓರ್ವ ವ್ಯಕ್ತಿಯನ್ನು ಪಿಎಸ್ಐ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳು ವಶಕ್ಕೆ ಪಡೆದು, 37 ಗ್ರಾಂ ಗಾಂಜಾ ಮತ್ತು ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ.

ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

