Friday, February 27, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಕೆಲವರು ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ

ಚಿಕ್ಕಮಗಳೂರು: ಕೆಲವರು ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ

ಚಿಕ್ಕಮಗಳೂರು:  ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳಿಗೆ ಸಮಾಜದಲ್ಲಿ ಬಹಳಷ್ಟು ಗೌರವವಿದೆ. ಕೆಲವರು ಸಂಪೂರ್ಣ ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.

ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ ಭಾರತೀಯ ಬಾಹ್ಯಕಾಶ ಕೇಂದ್ರ, ಟೌನ್ ಮಹಿಳಾ ಸಮಾಜ ಸಮೂಹ ಶಿಕ್ಷಣ ಸಂಸ್ಥೆ, ತಕ್ಷ್ ಅಕಾಡೆಮಿ, ರೋಟರಿ ಸಂಸ್ಥೆ ಮತ್ತು ವ್ಹಿಲ್ ಸಂಸ್ಥೆ ಸಹಯೋಗದ ಲ್ಲಿ ಆಯೋಜಿಸಿದ್ಧ ವಿಶ್ವ ಬಾಹ್ಯಕಾಶ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಜನತೆ ವಿಜ್ಞಾನ ಕ್ಷೇತ್ರಕ್ಕೆ ಒತ್ತು ನೀಡುತ್ತಿಲ್ಲ. ವೈಯಕ್ತಿಕ ಕುಟುಂಬದ ಆಲೋ ಚನೆಯಲ್ಲಿ ವೇತನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಇಸ್ರೋ ಸಂಸ್ಥೆ ವಿಜ್ಞಾನದ ಸಮಗ್ರ ಮಾಹಿತಿಗಳನ್ನು ಪರಿಚಯಿಸಲು ಸಪ್ತಾಹ ಆಚರಿಸಿ ಬಾಹ್ಯಕಾಶದ ಹಿನ್ನೆಲೆ ತಿಳಿಯಪಡಿಸುತ್ತಿರುವುದು ಹೆಮ್ಮೆ ಯ ಸಂಗತಿ ಎಂದರು.

1963ರಲ್ಲಿ ಮಾಜಿ ಪ್ರಧಾನಿ ನೆಹರು ಅವರು ಸಂಶೋಧಕರೊಂದಿಗೆ ಚರ್ಚಿಸಿ ಇಸ್ರೋ ಸಂಸ್ಥೆ ಪ್ರಾರ ಂಭಿಸಿದರು. ಇಂದಿಗೂ ಮಾನವ ಚಂದ್ರಯಾನ, ಮಂಗಳಯಾನ ಹಾಗೂ ರಾಕೇಟ್ ಉಡಾವಣೆಗಳಂಥ ಭೂಮಿಯಿಂದ ಹೊರಪ್ರಪಂಚಕ್ಕೆ ತೆರಳಲು ವಿಜ್ಞಾನಿಗಳ ಕಠಿಣ ಪರಿಶ್ರಮ ಹಾಗೂ ತಂತ್ರಜ್ಞಾನವೇ ಕಾರಣ ವಾಗಿದೆ ಎಂದು ತಿಳಿಸಿದರು.

ಇಂದಿಗೂ ರಾಷ್ಟ್ರದ ಪ್ರಜೆಗಳಾದ ಸುಭಾಶ್ ಶುಕ್ಲ, ಸುನೀತಾ ವಿಲಿಯಂ ಸೇರಿದಂತೆ ಅನೇಕರು ಭೂಮಿ ಯ ಗುರುತ್ವಾಕರ್ಷಣೆ ಇಲ್ಲದಿರುವ ಪ್ರದೇಶಕ್ಕೆ ತೆರಳಿ ತಿಂಗಳುಗಟ್ಟಲೇ ಅಧ್ಯಯನ ನಡೆಸಿ ಮರಳಿ ಭೂಮಿ ಯತ್ತ ಬಂದು ಸಾಧನೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಯುವವಿಜ್ಞಾನಿಗಳು ಸಾಧಕರ ಬದುಕನ್ನು ಆದರ್ಶವಾಗಿ ಟ್ಟುಕೊಂಡು ವಿಜ್ಞಾನ ಜಗತ್ತಿಗೆ ಹೆಜ್ಜೆ ಹಾಕಬೇಕು ಎಂದರು.

ಮಕ್ಕಳಿಗೆ ಪಠ್ಯದ ಚಟುವಟಿಕೆ ಜೊತೆಗೆ ಬಾಹ್ಯಕಾಶದ ಚಟುವಟಿಕೆಗಳನ್ನು ಪರಿಚಯಿಸಲು ಇಸ್ರೋ ಸಂ ಸ್ಥೆ ಮುಂದಾಗಿದ್ದು ಇವುಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ರಸಪ್ರಶ್ನೆ ಸ್ಪರ್ಧೆ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿಜೇತರಾಗಿ ಹೊರಹೊಮ್ಮಬೇಕು. ಈ ಸಾಧನೆಗೆ ಗುರುಗಳು, ಪಾಲಕರು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್.ರುದ್ರಪ್ಪ ಮಾತನಾಡಿ ಸಮಾಜದಲ್ಲಿ ವಿಜ್ಞಾನಿಗಳ ಸಂಖ್ಯೆ ಇಳಿಕೆಗೊಂಡು ವೈದ್ಯ ಹಾಗೂ ಇಂಜಿನಿಯರ್ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮಕ್ಕಳಲ್ಲಿ ಇಸ್ರೋ ಬಾಹ್ಯಕಾಶದ ಕುತೂ ಹಲವನ್ನು ಮೂಡಿಸಿ ಪ್ರೇರೇಪಿಸಬೇಕು. ಮೊಬೈಲ್ ರೀಲ್ಸ್‌ಗಳ ವ್ಯಕ್ತಿಗಳನ್ನು ಅನುಸರಿಸದೇ, ವಿಜ್ಞಾನ ಕ್ಷೇತ್ರ ದ ಸಾಧಕರನ್ನು ನಾಯಕರೆಂದು ಭಾವಿಸಬೇಕು ಎಂದರು.

ಪ್ರಸ್ತುತ ದಿನದಲ್ಲಿ ಗೂಗಪ್‌ಪ್ಯಾಪ್ ತಂತ್ರಜ್ಞಾನವು ಕ್ಷಣಾರ್ಧದಲ್ಲಿ ದಾರಿ ತೋರಿಸುತ್ತದೆ. ವಿಶ್ವವಿಖ್ಯಾತ ವಿಶ್ವೇಶ್ವರಯ್ಯ ಅವರ ಮೆದುಳು ಸಹ ಶೇ.೨೨ ರಷ್ಟು ಬಳಕೆಯಲ್ಲಿದೆ ಎಂದು ಅಧ್ಯಯನಗಳು ತಿಳಿಸುತ್ತೇವೆ. ಆದರೆ ಇಂದಿನ ದಿನದಲ್ಲಿ ಯುವಸಮೂಹ ಕೇವಲ ಶೇ.೨ರಷ್ಟು ಮಾತ್ರ ಮೆದುಳು ಕೆಲಸ ಮಾಡುತ್ತಿದ್ದು ಈ ಬಗ್ಗೆ ಅವಲೋಕಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಎನ್.ಪಿ. ಲಿಖಿತ್, ಟಿಎಂಎಸ್ ಕಾರ್ಯದರ್ಶಿ ಟಿ.ಈ.ಶುಭದ, ಪ್ರಾಂಶುಪಾಲ ಇಂದ್ರೇಶ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಚೇತನ್‌ಕುಮಾರ್, ಮುಖ್ಯೋಪಾಧ್ಯಾಯ ಎಂ.ಎಸ್.ನಟರಾಜ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!