Tuesday, August 11, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ

ಚಿಕ್ಕಮಗಳೂರು: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ

Telegram Group
Join Now

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಜೋರಾಗಿದೆ.ಈ ಹೊತ್ತಿನಲ್ಲೇ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಕುರ್ಚಿ ಕಿತ್ತಾಟ ಈಗ ಬೀದಿಗೆ ಬಂದಿದೆ.

ಇದರ ನಡುವೆ ಸಿದ್ದರಾಮಯ್ಯ ಕರ್ನಾಟಕದ ಸಿಎಂ ಆಗಿ ಮುಂದುವರೆಯಲಿ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಚಿಕ್ಕಮಗಳೂರು ನಗರದ ಗಣಪತಿ ದೇವಾಲಯದಲ್ಲಿ ‌ಪೂಜೆ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹೌದು .. ಜಸ್ಟೀಸ್ ಫಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಭಾವಚಿತ್ರ ಹಿಡಿದು ಪೂಜೆ ನಡೆಸಿದ್ದಲ್ಲದೇ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಮತ್ತು ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಿದ ಅಭಿಮಾನಿಗಳು


ಅದೇ ರೀತಿ ಗಣೇಶನಿಗೆ ತೆಂಗಿನಕಾಯಿ ಈಡುಗಾಯಿ ಹೊಡೆದು ಪೂಜೆ ಸಹ ಸಲ್ಲಿಸಿದರು, ಆ ನಂತರ ಉಳಿಯಲಿ ಉಳಿಯಲಿ ಸಿದ್ದರಾಮಯ್ಯ ಉಳಿಯಲಿ ಎಂದು ಘೋಷಣೆ ಕೂಗಿದ ಅಭಿಮಾನಿಗಳು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments