Saturday, July 11, 2026
Homeಕ್ರೈಮ್ಚಿಕ್ಕಮಗಳೂರು: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಚ್‌ ಖಂಡಿಸಿ ಶೃಂಗೇರಿ ಕ್ಷೇತ್ರ ಬಂದ್

ಚಿಕ್ಕಮಗಳೂರು: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಚ್‌ ಖಂಡಿಸಿ ಶೃಂಗೇರಿ ಕ್ಷೇತ್ರ ಬಂದ್

Telegram Group
Join Now

ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮಹಿಳೆ‌ ಬಲಿ ಪ್ರಕರಣ ಹಾಗೂ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಚ್‌ ಪ್ರಕರಣ ಖಂಡಿಸಿ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದ್‌ ಗೆ ಕರೆ ನೀಡಲಾಗಿದೆ.

ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕುಗಳು ಹಾಗೂ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿ ಬಂದ್ ಜಾರಿಯಲ್ಲಿದ್ದು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳು ಸ್ಥಗಿತಗೊಳಿಸಲಾಗಿದೆ.

ನಾಗರಿಕ ಹಿತ ರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕರು ಬಿಜೆಪಿ-ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳಿಂದ ಬಂದ್‌ ಗೆ ಕರೆ ನೀಡಿದ್ದು ಬೆಳಗ್ಗೆ 8 ರಿಂದ ಸಂಜೆ 5ರ ತನಕ ಬಂದ್ ಮುಂದುವರೆಯಲಿದ್ದು ಬೆಳಿಗ್ಗೆ 11ಗಂಟೆಗೆ ಬಾಳೆಹೊನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದ್ದು ಸರ್ಕಾರದ ವಿರುದ್ಧ ಇಂದೂ ಮುಂದುವರೆಯಲಿರುವ ಹೋರಾಟ ನಿನ್ನೆ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆಸಿದ ಖಾಕಿ ನ್ಯಾಯ ಕೇಳಿದ್ದ ರೈತರಿಗೆ ‘ಲಾಠಿ ಏಟು ಭಾಗ್ಯ’ ನೀಡಿದ ಸರ್ಕಾರ ಚಿಕ್ಕಮಗಳೂರು ಜಿಲ್ಲಾಡಳಿತದ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು SP & DC, ಶಾಸಕರ ಸಮ್ಮುಖದಲ್ಲೇ ರೈತರ ಮೇಲೆ ಲಾಠಿ ಪ್ರಹಾರವಾಘಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments