Thursday, February 19, 2026
Homeಕ್ರೈಮ್ಚಿಕ್ಕಮಗಳೂರು: ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಕೇಸ್:‌ ಪ್ರಮುಖ ಆರೋಪಿ ಯಾಸಿನ್ ಸೇರಿ ಆರು...

ಚಿಕ್ಕಮಗಳೂರು: ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಕೇಸ್:‌ ಪ್ರಮುಖ ಆರೋಪಿ ಯಾಸಿನ್ ಸೇರಿ ಆರು ಜನರ ಬಂಧನ!

ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯ ಸುಧಾ ಎಂಬುವವರ ಮನೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು ಈವರೆಗೆ ಪ್ರಮುಖ ಆರೋಪಿ ಯಾಸಿನ್ ಸೇರಿ ಆರು ಜನರನ್ನು ಬಂಧಿಸಲಾಗಿದೆ.

ಕಳೆದ ಒಂದು ವಾರದಿಂದ ಕಿಡಿಗೇಡಿಗಳ ಗುಂಪು ಮನೆಗಳ ಮೇಲೆ ಕಲ್ಲು ಎಸೆಯುವುದು ಮತ್ತು ಕಳೆದ ಮೂರು ದಿನಗಳಿಂದ ಹೆಣ್ಣುಮಕ್ಕಳನ್ನು ಚುಡಾಯಿಸುವಂತಹ ಕೃತ್ಯಗಳಲ್ಲಿ ತೊಡಗಿದೆ ಎನ್ನುವುದು ಆಕ್ರೋಶಕ್ಕೆ ಕಾರಣವಾಗಿತ್ತು..

ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಪ್ರಾಪ್ತರು ಸೇರಿ ಆರು ಮಂದಿ ಬಂಧಿಸಿದ್ದಾರೆ. ಮೊಹಮದ್ ಮತೀನ್, ಅಯಾನ್, ಮುನ್ನಾವರ್ ಪಾಷಾ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕ್ಷದ್ ‌ಹುಸೇನ್ ಬಂಧಿತರು. ರಾತ್ರಿ ಚಿಕ್ಕಮಗಳೂರಿನ ನ್ಯಾಯಾಲಯದ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಲಾಗಿದೆ.

ಪೊಲೀಸರು ಆರು ಆರೋಪಿಗಳನ್ನು ಹಾಜರುಪಡಿಸಿದ್ದು, ಉಳಿದ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ನಾಲ್ವರು ಅಪ್ರಾಪ್ತರನ್ನು ಹಾಸನದ ರಿಮ್ಯಾಂಡ್ ಹೋಂಗೆ ಶಿಫ್ಟ್ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!