Wednesday, March 25, 2026
Homeಕ್ರೈಮ್ಚಿಕ್ಕಮಗಳೂರು: ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದ್ದಕ್ಕೆ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಗೇಟ್ ಪಾಸ್: ಬಿಜೆಪಿ ಆಕ್ರೋಶ

ಚಿಕ್ಕಮಗಳೂರು: ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದ್ದಕ್ಕೆ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಗೇಟ್ ಪಾಸ್: ಬಿಜೆಪಿ ಆಕ್ರೋಶ

ಚಿಕ್ಕಮಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿಗಳಿಗೆ ಗೇಟ್ ಪಾಸ್ ಕೊಟ್ಟ ಘಟನೆ ನಗರದ ಕಾಲೇಜಿನಲ್ಲಿ ನಡೆದಿದೆ. ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ

ಹೌದು ..ಚಿಕ್ಕಮಗಳೂರು ನಗರದ MES ಪಿಯು ಕಾಲೇಜಿನಲ್ಲಿ ಮೊದಲ ವರ್ಷದ ಪಿಯು ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಾರೆ. ಆದ್ರೆ, ಇದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಯ್ಯಪ್ಪ ಮಾಲೆ‌ ತೆಗೆದು ಬರುವಂತೆ ಸೂಚನೆ ನೀಡಿ ಹೊರಗೆ ಕಳುಹಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ನೂರಾರು ಹಿಂದೂ ಸಂಘಟನೆಗಳ ಮುಖಂಡರು, ಕಾಲೇಜು ಬಳಿ ಬಂದು ಕಾಲೇಜ್ ಅಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದರು.

ನೂರಾರು ವಿದ್ಯಾರ್ಥಿಗಳು ಬರ್ತೀವಿ, ತಾಕತ್ತಿದ್ರೆ ತಡೀರಿಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಹಿಂದೂ ವಿರೋಧಿ ಕೃತ್ಯ ನಡೀತಿದೆ ಇವತ್ತು ಅಯ್ಯಪ್ಪ ಮಾಲಾಧಾರಿಗಳನ್ನ ಹೊರಹಾಕಿದ್ದಾರೆ ನಾಳೆ ಕುಂಕುಮ ಅಳಿಸಿ ಬನ್ನಿ ಅಂತಾ ಹೇಳ್ತಾರೆ ಮಾಲೆ ಹಾಕೊಂಡು ಕಾಲೇಜಿಗೆ ಬರಬಾರದಂತೆ ಎಂದು ಬೇಸರ ಹೊರಹಾಕಿದ ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ MES ಪಿಯು ಕಾಲೇಜಿನ ಪ್ರಿನ್ಸಿಪಾಲ್, ನಾವು ಸರ್ಕಾರ ಹಾಗೂ ಕಾಲೇಜು ಆಡಳಿತ ಮಂಡಳಿಯ ಆದೇಶ ಪಾಲಿಸಿದ್ದೇವೆ. ನಮ್ಮಲ್ಲಿ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ಬಟ್ಟೆ ಧರಿಸುವಂತಿಲ್ಲ. ವಿದ್ಯಾರ್ಥಿಗಳಿಗೆ ನಾವು ತಿಳಿ ಹೇಳಿದ್ದೇವೆ ಅಷ್ಟೇ. ಸದ್ಯಕ್ಕೆ ಮೂವರು ವಿದ್ಯಾರ್ಥಿಗಳನ್ನ ತರಗತಿಗೆ ಕೂರುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!