ಚಿಕ್ಕಮಗಳೂರು: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಾ.ವಿಕ್ರಂ ಅಮಟೆ ಐಪಿಎಸ್ ಪೊಲೀಸ್ ಅಧೀಕ್ಷಕರು ಅವರ ನೇತೃತ್ವದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜರುಗಿಸಲಾಗಿದೆ.

2024-25 ನೇ ಸಾಲಿನ SSLC ಮತ್ತು PUC ಪರೀಕ್ಷೆಗಳಲ್ಲಿ ಶೇ. 90% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳಿಸಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಒಟ್ಟು 30 ಮಕ್ಕಳಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಪ್ರೋತ್ಸಾಹ ಧನ ಮತ್ತು ಪ್ರಶಂಸನಾ ಪತ್ರಗಳನ್ನು ವಿತರಿಸಿ, ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಕ್ಕಳಿಗೆ ಶುಭ ಹಾರೈಸಿ ಮಕ್ಕಳಲ್ಲಿ ದೃಢ ಆತ್ಮವಿಶ್ವಾಸ, ಉತ್ತಮ ನಡವಳಿಕೆ, ಸಮಾಜ ಸೇವೆ, ಮಾನವೀಯ ಮೌಲ್ಯಗಳು & ತತ್ವಗಳು, ಸಾಮಾಜಿಕ ಕಳಕಳಿ, ಪೋಷಕರಿಗೆ ಗುರು ಹಿರಿಯರಿಗೆ ಗೌರವ, ಬದುಕಿನಲ್ಲಿ ಧನಾತ್ಮಕತೆ, ಯಶಸ್ಸು ಸಾರ್ಥಕತೆ ಇತ್ಯಾದಿ ವಿಚಾರಗಳ ಕುರಿತು ಹಿತ ನುಡಿದು ಸ್ಫೂರ್ತಿ ಹಾಗೂ ಹುಮ್ಮಸ್ಸು ತುಂಬಿ ಪ್ರೋತ್ಸಾಹಿಸಿದರು.

ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವಾಗಿದ್ದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿಟಿ ಜಯಕುಮಾರ್ ಸೇರಿದಂತೆ ಜಿಲ್ಲೆಯಲ್ಲಿನ ಪೊಲೀಸರ ಕುಟುಂಬದ ಸದಸ್ಯರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
