ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ನಡೆದಿದೆ.ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳು.
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಂದ್ರೇಗೌಡ(60), ಚಂದ್ರೇಗೌಡ ಪತ್ನಿ ಸರೋಜ(55) ಹಾಗೂ ಚಿಕ್ಕಮಗಳೂರು ನಗರಸಭೆಯ ಮಾಜಿ ಅಧ್ಯಕ್ಷ ನಿಂಗೇಗೌಡ ಪತ್ನಿ ಜಯಮ್ಮ ಅವರು ಥೈಲ್ಯಾಂಡ್ ಟೂರ್ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ವಾಪಸಾಗಿದ್ದರು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಬಳಿಕ ಕಾರು ಪಲ್ಟಿ ಹೊಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದ್ಯ ಮೃತದೇಹವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
