Wednesday, March 25, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪ ಹುಲಿ ಓಡಾಟ: ಪ್ರವಾಸಿಗರಲ್ಲಿ ಆತಂಕ: Video Viral

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪ ಹುಲಿ ಓಡಾಟ: ಪ್ರವಾಸಿಗರಲ್ಲಿ ಆತಂಕ: Video Viral

ಚಿಕ್ಕಮಗಳೂರು : ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆಸಿರುವುದರಿಂದ ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.

ಹೌದು .. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಭಯ ಆವರಿಸಿಬಿಟ್ಟಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ.

ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!