ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳುರು ಜಿಲ್ಲೆಯಲ್ಲಿ ಬಡವರಿಗೆ ಕೆಲವು ಆಮಿಷಗಳನ್ನು ಒಡ್ಡಿ ಅನಧಿಕೃತವಾಗಿ ಬ್ಯಾಂಕ್ ಖಾತೆಗಳನ್ನ ಓಪನ್ ಮಾಡಲಾಗಿದ್ದು ಆ ನಂತರ ಇದರಲ್ಲಿ ಲಕ್ಷಾಂತರ ಹಣದ ವಹಿವಾಟು ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ.

ಈ ವಿಚಾರವಾಗಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇದರ ಬಗ್ಗೆ ಮಾಹಿತಿ ಕಲೆ ಹಾಕಿ ಬಡವರನ್ನು ವಂಚಿಸುವವ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಶಾಸಕ ಎಚ್.ಡಿ.ತಮ್ಮಯ್ಯನವರು ಮನವಿ ಪತ್ರ ಸಲ್ಲಿಸಿದರು.
ಈ ಸಂಬಂಧ ವಿಚಾರಣೆ ನಡೆಸಿ ಅಪರಾಧಿಗಳನ್ನು ಬಂಧಿಸಿರುವುದು ಸ್ವಾಗತರ್ಹ. ಈ ಬಗ್ಗೆ ಸಾರ್ವಜನಿಕರಿಗೂ ಕೂಡ ಅನೇಕ ಗೊಂದಲಗಳು ಮೂಡಿವೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ ಯಾವ ಪ್ರಭಾವಕ್ಕೂ ಮಣಿಯದೇ ಅಮಾಯರಿಗೆ ನ್ಯಾಯ ಒದಗಿಸಿ ತಪ್ಪಿತಸ್ತರಿಗೆ ಶಿಕ್ಷೆಯಾಗಲಿ ಎಂದು ಮನವಿ ಮಾಡಿಕೊಂಡರು.
