ಚಿಕ್ಕಮಗಳೂರು: ನಗರದಲ್ಲಿ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಹೌದು ..ಭಾನುವಾರ ರಾತ್ರಿ ಚಿಕ್ಕಮಗಳೂರು ನಗರದ 60 ಅಡಿ ರಸ್ತೆಯ ಕಡೆಗೆ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಡಿವೈಎಸ್ಪಿ, ಸಿ.ಇ.ಎನ್. ಪೊಲೀಸ್ ಠಾಣೆ ಅವರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 1.39 ಗ್ರಾಂ ಗಾಂಜಾ ಹಾಗೂ ಸ್ಕೂಟಿ ಮತ್ತು 2 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.