ಚಿಕ್ಕಮಗಳೂರು : ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ಆಡಳಿತಾಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರಡ್ಡಿ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.
ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿಯ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ತು ಮತ್ತು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರ ಕಚೇರಿ ಈ ಆದೇಶವನ್ನು ಹೊರಡಿಸಿದೆ.
ಸಮಿತಿ ಬದಲಾವಣೆ ಮಾಡಬೇಕೆಂಬ ಆಗ್ರವೂ ಕೇಳಿ ಬಂದಿತ್ತು.ಪ್ರವರ್ಗ ಎ ಶ್ರೇಣಿಗೆ ಸೇರ್ಪಡೆಗೊಳ್ಳುವ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗಿತ್ತು. ವ್ಯವಸ್ಥಾಪನಾ ಸಮಿತಿ ಅವಧಿ ಮುಗಿದಿದ್ದು, ದೇವಸ್ಥಾನ ದೈನಂದಿನ ಆಡಳಿತ ನಿರ್ವಹಣೆ ಹಿತಾದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
