ಚಿಕ್ಕಮಗಳೂರು: ಆಟೋ ಡಿಕ್ಕಿ ಆಗಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಮುಳ್ಳುಂಡೆ ಗ್ರಾಮದ ಉದ್ದೇಗೌಡ (68) ಎಂದು ಗುರುತಿಸಲಾಗಿದೆ. ಉದ್ದೇಗೌಡ ಅವರು ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಹಿಂದಿನಿಂದ ವೇಗವಾಗಿ ಬಂದ ಆಟೋ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಆಲ್ದೂರು ಪೊಲೀಸರು ಅಪಘಾತಕ್ಕೆ ಕಾರಣವಾದ ಆಟೋ ಚಾಲಕನನ್ನುವಶಕ್ಕೆ ಪಡೆದುಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
