ಚಿಕ್ಕಮಗಳೂರು: ಕಾಫಿನಾಡಿನ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಎಚ್ ಪಿ.ಮಂಜೇಗೌಡ ಆಯ್ಕೆಯಾಗಿದ್ದಾರೆ.
ಕಳೆದ 40 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿರುವ ಅವರು ಜಿಲ್ಲೆ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮದೇ ಆದ ಪಾತ್ರ ನಿರ್ವಹಿಸಿದ್ದಾರೆ. ಎಐಸಿಸಿ ವೀಕ್ಷಕರ ವರದಿ ಆಧರಿಸಿ ಹೈಕಮಾಂಡ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿ ನೀಡಿದೆ.
ಚಿಕ್ಕಮಗಳೂರು ತಾಲೂಕಿನ ಬೀಕನಹಳ್ಳಿ ಗ್ರಾಮದ ಕುರುಬ ಸಮುದಾಯದವರಾದ ಮಂಜೇಗೌಡ ಅವರು ಬೀಕನಹಳ್ಳಿ ಗ್ರಾಪಂ ಸದಸ್ಯರಾಗಿದ್ದು, ಬೀಕನಹಳ್ಳಿ ಸೊಸೈಟಿ ಸದಸ್ಯರೂ ಆಗಿದ್ದಾರೆ.
ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಗೆಲುವಿನಲ್ಲಿ ಹಾಗೂ ಲಿಂಗಾಯತ ಸಮುದಾಯದವರಾದ ಎಚ್.ಡಿ.ತಮ್ಮಯ್ಯ ಅವರನ್ನು ಪಕ್ಷಕ್ಕೆ ಕರೆತಂದು ಗೆಲ್ಲಿಸುವಲ್ಲಿ ಮಂಜೇಗೌಡ ಶ್ರಮಿಸಿದ್ದರು.
ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ವಿಶ್ವಾಸವನ್ನು ಮುಖಂಡರು ಹಾಗೂ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ.
