ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ಮಹಾತ್ಮಗಾಂಧೀಜಿಯವರ 156ನೆ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಒಳ ಆವರಣದಲ್ಲಿ ನೆನಪಿನಂಗಳ ಮಹಾತ್ಮಗಾಂಧೀಜಿಯವರ ಪುತ್ಥಳಿಗೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಅವರು ಮಾಲಾಪ೯ಣೆ ಮಾಡಿದರು.

ಹೌದು .. ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ನಗರಸಭೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಎಸ್ ಪಿ ಕಚೇರಿ ಆವರಣದಲ್ಲಿ ರಾಷ್ಟ್ರಪಿತ ನೆನಪಿನಂಗಳದ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
ಇದೇ ವೇಳೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತು ಸೇವನೆ ನಿಯಂತ್ರಣ ಹಾಗೂ ಜನಜಾಗೃತಿ ಮೂಡಿಸಲು ಅಭಿವೃದ್ದಿಪಡಿಸಲಾಗಿರುವ ಕ್ಯೂಆರ್ ಕೋಡ್ ಅನ್ನು ಸಹ ಬಿಡುಗಡೆ ಮಾಡಿದರು.
ಈ ಸಂದಭ೯ದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ, ಭದ್ರಾ ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಜಿಲ್ಲಾಧಿಕಾರಿ ಮೀನಾನಾಗರಾಜ್ ಸಿ.ಎನ್. ಜಿ.ಪಂ. ಮುಖ್ಯಕಾಯ೯ನಿವ೯ಹಣಾಧಿಕಾರಿ ಹೆಚ್.ಎಸ್.ಕೀತ೯ನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮುಂತಾದವರು ಉಪಸ್ಥಿತರಿದ್ದರು..
