ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐಎಎಸ್ ಎಂದು ಹೇಳಿಕೊಂಡು ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರಿಗೆ, ತಾನು ಐಎಎಸ್ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದು ಆಸ್ಪತ್ರೆಯಲ್ಲೇ ಠಿಕಾಣೆ ಹೂಡಿದ್ದ ಈತ ಹಲವು ಮೆಡಿಕಲ್ ಶಾಪ್ ನವರನ್ನು ನಂಬಿಸಿ ಮೆಡಿಕಲ್ ಸಪ್ಲೈ ಮಾಡಿಸಿಕೊಡುವುದಾಗಿ ಹಣ ಪಡೆದಿದ್ದಾನೆ ಎನ್ನಲಾಗಿದೆ. ಕಡೂರು ಮೂಲದವನಾಗಿದ್ದು, ಈತನ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಕೂಡ ಬಿದ್ದಿರುವುದು ಬೆಳಕಿಗೆ ಬಂದಿದೆ.

ಶ್ರೇಯಸ್ ಮೆಡಿಕಲ್ ಶಾಪ್ ನ ಸತೀಶ್ ಎಂಬುವರಿಂದ ನಲವತ್ತು ಲಕ್ಷಕ್ಕೂ ಹೆಚ್ಚು ಹಣ ತೆಗೆದುಕೊಂಡು ಮೋಸ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.ಇದೇ ರೀತಿಯಲ್ಲಿ ಹಲವರಿಗೆ ವಂಚಿಸಿರುವ ಮಾಹಿತಿಗಳು ಹರಿದಾಡುತ್ತಿವೆ.
ಬೆಂಗಳೂರಿನ ಲಾಡ್ಜ್ ಬಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ನಕಲಿ ದಾಖಲೆ ಸೃಷ್ಟಿ ಮಾಡಿರವುದು ಬೆಳಕಿಗೆ ಬಂದಿದೆ.

ಜಿಲ್ಲೆಯಲ್ಲಿ ಎರಡು ಕೋಟಿಗೂ ಹೆಚ್ಚಿನ ವಂಚನೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.ಇನ್ನೂ ಬೆಂಗಳೂರಿನಲ್ಲಿ ಎಷ್ಟು ಜನರಿಗೆ ವಂಚನೆ ಆಗಿದೆ ಎಂಬದು ತಿಳಿದು ಬರಬೇಕಾಗಿದೆ. ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಗುತ್ತಿಗೆ ಅಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಹೆಸರು ಕೇಳಿಬರುತ್ತಿದೆ.
ಸದ್ಯ ಪೊಲೀಸರು ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಇನ್ನೂ ಹಲವು ಆಸ್ಪತ್ರೆ ಮಾಲೀಕರಿಗೆ ಈತ ವಂಚಿಸಿರುವ ಶಂಕೆ ವ್ಯಕ್ತವಾಗಿದೆ.
