ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು) ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳವನ್ನು ಜುಲೈ 28 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಈ ಮೇಳದಲ್ಲಿ ಬಿ.ಇ., ಪದವೀಧರ, ಡಿಪ್ಲೊಮಾ, ಪಿ.ಯು.ಸಿ., ಎಸ್.ಎಸ್.ಎಲ್.ಸಿ. ಮತ್ತು ವಿವಿಧ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಹಾಗೂ ಐ.ಟಿ.ಐ.ನ ವಿವಿಧ ವೃತ್ತಿಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಅಪ್ರೆಂಟಿಸ್ ಶಿಪ್ ಮೇಳದಲ್ಲಿ ತಮ್ಮ ಎಲ್ಲಾ ಮೂಲ ದಾಖಲಾತಿಗಳು, ಆಧಾರ್ ಸಂಖ್ಯೆ ಮತ್ತು ಇ-ಮೇಲ್ ಐಡಿಯೊಂದಿಗೆ ಹಾಜರಾಗಬಹುದು. ಮೇಳದಲ್ಲಿ ವಿವಿಧ ಉದ್ದಿಮೆದಾರರು ಪಾಲ್ಗೊಳ್ಳುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ಶಿಪ್ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಅದೇ ರೀತಿ ಜಿಲ್ಲೆಯ ಎಲ್ಲಾ ಉದ್ದಿಮೆದಾರರು ಈ ಮೇಳದಲ್ಲಿ ಭಾಗವಹಿಸಿ ತಮ್ಮ ಉದ್ದಿಮೆಯನ್ನು ಅಪ್ರೆಂಟಿಸ್ ಶಿಪ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಮತ್ತು ಅಪ್ರೆಂಟಿಸ್ ಶಿಪ್ ತರಬೇತಿಗೆ ನೋಂದಣಿ ಮಾಡಿಸಿರುವ ಅಭ್ಯರ್ಥಿಗಳನ್ನು ತಮಗೆ ಅವಶ್ಯಕವಿರುವ ಖಾಲಿ ಸ್ಥಾನಗಳಿಗೆ ಭರ್ತಿಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಅಪ್ರೆಂಟಿಸ್‌ಶಿಪ್ ಮೇಳಕ್ಕೆ ಅರ್ಹ ಅಭ್ಯರ್ಥಿಗಳು ಹಾಗೂ ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ9611596629, 9964070245, 8792139703, 9480489306, 9886028437, 7411869736, 9972594567, 8553651973 & 7019174607 ಸಂಖ್ಯೆಗಳನ್ನು ಸಂಪರ್ಕಿಸಬಹುದು.