ಚಿಕ್ಕಮಗಳೂರು: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಭೆಯ ಸಂದರ್ಭದಲ್ಲಿ ಮಹಿಳೆಯರ ಮೇಲೆ ಲಾಠಿ ಬೀಸಿದ ಪೊಲೀಸ್ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಬೇಕೆಂದು ರಾಜ್ಯ ಸರ್ಕಾರ ನಿರ್ದೇಶನ ನೀಡುವಂತೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮೋರ್ಚಾ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ಹೌದು .. ಸೆಪ್ಟಂಬರ್ 7 ರಂದು ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡುತ್ತಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಓಡುವಾಗ ಹಲವು ಮಹಿಳೆಯರಿಗೆ ಸಹ ಲಾಠಿ ತಗುಲಿದೆ ಇದನ್ನ ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮೋರ್ಚಾ ವತಿಯಿಂದ ದೂರು ಸಲ್ಲಿಕೆಯಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಜಸಂತ್ ಅನಿಲ್ ಕುಮಾರ್, ನಗರಸಭಾ ಉಪಾಧ್ಯಕ್ಷರಾದ ಶ್ರೀಮತಿ ಲಲಿತಾ ನಾಯಕ್, ನಹರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಕವಿತಾ ಶೇಖರ್ ರೂಪಾ ಕುಮಾರ್ , ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ಶ್ರೀಮತಿ ಪ್ರೀತಿ ಯೋಗೇಶ್, ನಗರ ಮಹಿಳಾ ಮೋರ್ಚಾ ಕಾರ್ಯದರ್ಶಿಯಾದ ಶ್ರೀಮತಿ ಸೌಮ್ಯ ಉಪಸ್ಥಿತರಿದ್ದರು
ವರದಿ: ವಿಠಲ್ ಶೃಂಗೇರಿ
ದೂರವಾಣಿ ಸಂಖ್ಯೆ : 7676798969
