Saturday, August 9, 2025
!-- afp header code starts here -->
Homebig breakingBMTCಗೆ 840 ನೂತನ‌ ಬಸ್ - ಮೊದಲ ಹಂತದ 100 ಬಸ್ ಲೋಕಾರ್ಪಣೆ ಮಾಡಿದ ಸಿಎಂ...

BMTCಗೆ 840 ನೂತನ‌ ಬಸ್ – ಮೊದಲ ಹಂತದ 100 ಬಸ್ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ 12: ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಲೋಕಾರ್ಪಣೆ ಮಾಡಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -!-- afp header code starts here -->

Most Popular

Recent Comments

error: Content is protected !!