Tuesday, August 11, 2026
Homeಜಿಲ್ಲಾಸುದ್ದಿಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Telegram Group
Join Now

ಹಾಸನ: ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನಾಂಬೆ ದೇವಿ ದರ್ಶನ ಪಡೆದರು.

ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಇಂದು ಬೆಳಗ್ಗೆ 12ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ ದರ್ಶನ ಪಡೆದರು

ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು.

ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments